ಮೊದಲು ಖರ್ಗೆ ನಾಲಿಗೆ ಬಿಗಿಹಿಡಿದು ಮಾತನಾಡಲಿ: ತೆಲ್ಕೂರ್ ಆಕ್ರೋಶ! - ಮಲ್ಲಿಕಾರ್ಜುನ ಖರ್ಗೆ ಹೇಳಿಕೆ
🎬 Watch Now: Feature Video
ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಅವರು ಮೊದಲು ನಾಲಿಗೆ ಬಿಗಿಹಿಡಿದು ಮಾತನಾಡಲಿ ಎಂದು ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ ಅಷ್ಟೇ. ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಕದ ರಾಜ್ಯಕ್ಕೆ ಹೋದಾಗ ಆರ್ಎಸ್ಎಸ್ ಹಾಗೂ ಬಿಜೆಪಿ ವಿಷ ಉಗುಳುವ ಪಕ್ಷ ಎಂದು ವ್ಯಂಗ್ಯವಾಡಿದ್ದರು. ಅದಕ್ಕೆ ನಮ್ಮ ರಾಜಾಧ್ಯಕ್ಷರು ಪ್ರತ್ಯುತ್ತರ ನೀಡಿದ್ದಾರೆ ಅಷ್ಟೇ. ಇದಕ್ಕೆ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿ ನಮ್ಮ ರಾಜಾಧ್ಯಕ್ಷರು ನಾಲಿಗೆ ಬಿಗಿಹಿಡಿದು ಮಾತನಾಡಲಿ ಎಂದು ಹೇಳಿದ್ದಾರೆ. ಇದು ಸರಿಯಲ್ಲ ಎಂದು ಕಿಡಿಕಾರಿದರು. ಮೊದಲು ಮಲ್ಲಿಕಾರ್ಜುನ ಖರ್ಗೆ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಹರಿಹಾಯ್ದರು. ಕಾಂಗ್ರೆಸ್ ಪಕ್ಷದಲ್ಲೇ ಹೊಂದಾಣಿಕೆ ಕೊರತೆ ಇದೆ. ಡಿಕೆಶಿ ಒಂದು ಹೇಳಿಕೆ ನೀಡಿದ್ರೆ ಸಿದ್ದರಾಮಯ್ಯ ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ. ಮೊದಲು ಅವರ ಪಕ್ಷವನ್ನು ಶುದ್ಧ ಮಾಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ಬಗ್ಗೆ ಮಾತನಾಡಲಿ ಎಂದರು.