ರಾಮ ಮಂದಿರಕ್ಕೆ ಶಿಲಾನ್ಯಾಸ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಕರಸೇವಕರು - ಕರ ಸೇವಕರು
🎬 Watch Now: Feature Video
ತುಮಕೂರು: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣಕ್ಕಾಗಿ ಸಂಘ ಪರಿವಾರದ ಅನೇಕ ಕಾರ್ಯಕರ್ತರು 1992ರ ಕರಸೇವೆಯಲ್ಲಿ ಪಾಲ್ಗೊಂಡಿದ್ದರು. ರಾಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಈ ಸಂದರ್ಭದಲ್ಲಿ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಜಿಲ್ಲೆಯ ಕರಸೇವಕರು ತಮ್ಮ ಹೋರಾಟದ ತಮ್ಮ ನೆನಪಿನ ಬುತ್ತಿಯನ್ನು ಬಿಚ್ಚಿಟ್ಟಿದ್ದಾರೆ. ತುಮಕೂರು ನಗರದಿಂದ ಎರಡು ತಂಡಗಳಲ್ಲಿ ಕರಸೇವಕರು ಅಯೋಧ್ಯೆಗೆ ತೆರಳಿದ್ದರು. ಇವರಲ್ಲಿ ಇತ್ತೀಚೆಗೆ 22 ಮಂದಿ ಇಹಲೋಕ ತ್ಯಜಿಸಿದ್ದಾರೆ. ಚಿಕ್ಕನಾಯಕನಹಳ್ಳಿಯ ವೇದಮೂರ್ತಿ ಸೇರಿದಂತೆ ಇತರರು ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದಾರೆ.