ಶಾಶ್ವತ ನೆರೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕೈ ಕಾರ್ಯಕರ್ತರ ಪ್ರತಿಭಟನೆ
🎬 Watch Now: Feature Video
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ 'ಮುಳುಗದಿರಲಿ ಬದುಕು' ಎಂಬ ಅಭಿಯಾನ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಅಭಾಜಿ ವೃತ್ತ ದಿಂದ ಪ್ರಾರಂಭವಾಗಿ ತಹಶೀಲ್ದಾರ್ ಕಚೇರಿವರೆಗೂ ಕಾಲ್ನಡಿಗೆ ಮುಖಾಂತರ ಬಂದು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಜಲ ಪ್ರವಾಹಕ್ಕೆ 22 ಜಿಲ್ಲೆಗಳು ಕೊಚ್ಚಿ ಹೋಗಿವೆ. ಇದರಿಂದ ಜನ ಸಾಮಾನ್ಯರ ಬದುಕು ಅಸ್ತವ್ಯಸ್ತಗೊಂಡಿದೆ. ಈ ಕುರಿತು ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ತಹಸಿಲ್ದಾರ್ರಿಗೆ ಮನವಿ ಪತ್ರ ಸಲ್ಲಿಸಿದರು.