ದಕ್ಷಿಣ ಕನ್ನಡದಲ್ಲಿ ಚುನಾವಣೆಗೆ ಬಿರುಸಿನ ಸಿದ್ಧತೆ... ಮತಗಟ್ಟೆಗೆ ತೆರಳಲು ಸಿಬ್ಬಂದಿ ಸಜ್ಜು - ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ
🎬 Watch Now: Feature Video
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆಗಳು ಬಿರುಸಿನಿಂದ ನಡೆಯುತ್ತಿವೆ. ಕ್ಷೇತ್ರದಲ್ಲಿ 1,861 ಮತಗಟ್ಟೆಗಳಿದ್ದು, ಈ ಎಲ್ಲಾ ಮತಗಟ್ಟೆಗಳಿಗೆ ತೆರಳಲು ಚುನಾವಣಾ ಸಿಬ್ಬಂದಿ ಮತ್ತು ಪೊಲೀಸರು ಸಜ್ಜಾಗಿದ್ದಾರೆ. ಇಂದು ಹಲವೆಡೆ ನಡೆದ ಮಸ್ಟರಿಂಗ್ ಕೇಂದ್ರಕ್ಕೆ ಬಂದ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ತಮ್ಮ ತಮ್ಮ ಮತಗಟ್ಟೆಗಳ ಮಾಹಿತಿಗಳನ್ನು ಪಡೆದು ಮತಗಟ್ಟೆ ಕೇಂದ್ರಗಳಿಗೆ ತೆರಳಿದ್ದಾರೆ. ಚುನಾವಣಾ ಸಿಬ್ಬಂದಿ ಮಸ್ಟರಿಂಗ್ ಕೇಂದ್ರದಲ್ಲಿ ಮತಯಂತ್ರ, ವಿವಿಪ್ಯಾಟ್, ಕಂಟ್ರೋಲಿಂಗ್ ಸಿಸ್ಟಮ್ ಮತ್ತು ದಾಖಲೆಗಳನ್ನು ಪಡೆದುಕೊಂಡು ಮತಗಟ್ಟೆಗಳಿಗೆ ತೆರಳಿದ್ದಾರೆ. ಚುನಾವಣಾ ಕರ್ತವ್ಯಕ್ಕೆ 8,920 ಚುನಾವಣಾ ಸಿಬ್ಬಂದಿ ನಿಯೋಜಿತರಾಗಿದ್ದು, ಇವರು ಇಂದೇ ಮತಗಟ್ಟೆಗೆ ತೆರಳಿ ನಾಳಿನ ಮತದಾನದ ಕರ್ತವ್ಯ ನಿರ್ವಹಿಸಲಿದ್ದಾರೆ.