ಕ್ಷಯ ರೋಗ ಜಾಗೃತಿಗಾಗಿ ಕುಷ್ಟಗಿ ತಾಲೂಕು ಆಸ್ಪತ್ರೆಗೆ ರೆಡ್ ಲೈಟ್ ಅಳವಡಿಕೆ
🎬 Watch Now: Feature Video
ಕುಷ್ಟಗಿ(ಕೊಪ್ಪಳ): ಕ್ಷಯ ರೋಗದ ಬಗ್ಗೆ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಕುಷ್ಟಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ರೆಡ್ ಲೈಟ್ ಅಳವಡಿಸಲಾಗಿತ್ತು. ಕ್ಷಯ ರೋಗ ನಿರ್ಮೂಲನೆಗಾಗಿ ಪಣ ತೊಟ್ಟಿರುವ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದೆ. ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಆನಂದ ಗೋಟೂರು, ಕ್ಷಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೊಪ್ಪಳ ಜಿಲ್ಲೆ ಮಾದರಿಯಾಗಿದೆ. ಕ್ಷಯ ರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕಿದೆ. ಟಿಬಿ ಅಪಾಯಕಾರಿ ರೋಗ. ಆದರೆ, ಸಕಾಲಕ್ಕೆ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಬಹುದು. ನಿರ್ಲಕ್ಷಿಸಿದರೆ ಅಪಾಯಕಾರಿ ಎಂದರು.