ಯುವ ಮತದಾರರಿಗೆ ಮಿಂಚಿನ ನೋಂದಣಿ ಜಾಗೃತಿ ಜಾಥಾ - ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5657957-thumbnail-3x2-smg.jpg)
ಶಿವಮೊಗ್ಗ: 18 ವರ್ಷ ಪೂರ್ಣಗೊಂಡ ಯುವ ಮತದಾರರಿಗೆ ಮಿಂಚಿನ ನೋಂದಣಿ ಕಾರ್ಯಕ್ರಮ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾ ಆಡಳಿತ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಜಾಗೃತಿ ಜಾಥಾವು ನಗರದ ಕಸ್ತೂರಬಾ ಕಾಲೇಜಿನಿಂದ ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಕಾಲೇಜಿನ ಬಳಿ ಕೊನೆಗೊಂಡಿತು. ಇದಕ್ಕೂ ಮುನ್ನ ನಗರದ ಗೋಪಿ ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಯುವ ಮತದಾರರಿಗೆ ಮೊದಲು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಮತದಾರರ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.