ತುಂಗಾಭದ್ರೆಗೆ 1.30 ಲಕ್ಷ ಕ್ಯೂಸೆಕ್ ನೀರು... ಭೋರ್ಗರೆಯುತ್ತಿದೆ ಜಲಾಶಯ
🎬 Watch Now: Feature Video
ಕೊಪ್ಪಳ: ತುಂಗಾಭದ್ರಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜಿಲ್ಲೆಯ ಮುನಿರಾಬಾದ್ನಲ್ಲಿ ಹರಿಯುತ್ತಿರುವ ತುಂಗಾಭದ್ರಾ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಸುಮಾರು 2 ಲಕ್ಷ ಕ್ಯೂಸೆಕ್ ನೀರಿನ ಹರಿವಿನ ಪ್ರಮಾಣವಿದ್ದು, ನಿನ್ನೆ ರಾತ್ರಿಯಿಂದಲೇ ನದಿಗೆ ನೀರನ್ನು ಹರಿಬಿಡಲಾಗುತ್ತಿದೆ. ಸದ್ಯಕ್ಕೆ 1 ಲಕ್ಷದ 30 ಸಾವಿರ ಕ್ಯೂಸೆಕ್ ನೀರನ್ನು 33 ಗೇಟ್ಗಳ ಮೂಲಕ ನದಿಗೆ ಹರಿಬಿಡಲಾಗಿದೆ. ಇದರಿಂದ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆ ನಡುಗಡ್ಡೆಯಾಗಿದ್ದು, ಸಂಪರ್ಕ ಕಡಿದುಕೊಂಡಿದೆ. ಕೂಗಳತೆ ದೂರದಲ್ಲಿರುವ ವಿರುಪಾಪುರ ಗಡ್ಡೆಯಲ್ಲಿ ಸ್ವದೇಶಿ ಮತ್ತು ವಿದೇಶಿ ಪ್ರವಾಸಿಗರು ಸಿಲುಕಿಕೊಂಡಿದ್ದು, ಅವರನ್ನು ಕರೆ ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಅಲ್ಲಿನ ಪರಿಸ್ಥಿತಿ ಕುರಿತು ನಮ್ಮ ಈಟಿವಿ ಭಾರತ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...
Last Updated : Aug 11, 2019, 2:07 PM IST