ಶಿವಮೊಗ್ಗ: ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ - ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ
🎬 Watch Now: Feature Video

ಶಿವಮೊಗ್ಗ: ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಗಣರಾಜೋತ್ಸವದ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿಗೆ ವೇಗ ದೊರಕಿದೆ. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದೆ. ಈ ವರ್ಷ 119 ಕೋಟಿ ರೂ. ಸಂದಾಯ ಮಾಡಲಾಗಿದೆ ಎಂದರು. ಸಾಂಸ್ಕೃತಿಕ ಕಾರ್ಯಕ್ರಮಗಳು, ಪಥಸಂಚಲನ ನೋಡುಗರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಸನ್ಮಾನ ಸಲ್ಲಿಸಲಾಯಿತು.