ಚಿಕ್ಕನಾಯಕನಹಳ್ಳಿಯಲ್ಲಿ ಶ್ರೀಗಂಧದ ಮರ ಕಳ್ಳತನ... ಚೋರರ ಕೃತ್ಯ ಸಿಸಿಟಿವಿಯಲ್ಲಿ ಸೆರೆ - tumkur thievery news
🎬 Watch Now: Feature Video

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ತಹಶಿಲ್ದಾರ್ ಅವರ ವಸತಿಗೃಹದ ಅವರಣದಲ್ಲಿದ್ದ ಶ್ರೀಗಂಧದ ಮರವನ್ನು ಮೂವರು ಕಳ್ಳರು ಕದ್ದೊಯ್ದಿದ್ದಾರೆ. ಈ ಖದೀಮರ ಚಲನವಲನ ಎಲ್ಲವೂ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಸುಮಾರು 30 ವರ್ಷದ ಆಸುಪಾಸಿನ ಈ ಮೂವರು ಬೆಲೆಬಾಳುವ ಶ್ರೀಗಂಧ ಮರವನ್ನು ಕಳವು ಮಾಡಿದ್ದಾರೆ. ಈ ಕುರಿತಂತೆ ಅರಣ್ಯ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.