ನಾಡೋಜ ಪಾಟೀಲ ಪುಟ್ಟಪ್ಪರವರ ಆರೋಗ್ಯ ಚೇತರಿಕೆಗೆ ಸಂಕಲ್ಪ ಪೂಜೆ - kalaburagi latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6252829-thumbnail-3x2-klb.jpg)
ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಪ್ರಶಸ್ತಿ ಪುರಸ್ಕೃತ ಪಾಟೀಲ ಪುಟ್ಟಪ್ಪ ಆರೋಗ್ಯ ಚೇತರಿಕೆಗಾಗಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಸಂಕಲ್ಪ ಪೂಜೆ ನೆರವೇರಿಸಿದರು. ಕಲಬುರಗಿ ಶ್ರೀ ಶರಣಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು, ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದರು. ಹುಬ್ಬಳ್ಳಿಯಲ್ಲಿ ಪಾಪು ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಸಂಪೂರ್ಣ ಗುಣಮುಖರಾಗಿ ಶೀಘ್ರವೇ ಕನ್ನಡ ನಾಡು ನುಡಿ ಸಂಸ್ಕೃತಿ ಸೇವೆಗೆ ಮರಳಲಿ ಎಂದು ರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಹಾರೈಸಿದರು.