ಉದ್ಧವ್ ಠಾಕ್ರೆ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ - ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ
🎬 Watch Now: Feature Video
ಗಡಿ ವಿಚಾರದ ಬಗ್ಗೆ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಯನ್ನ ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಮಾತನಾಡಿದ ಅವರು, ಈ ಹಿಂದೆ ಕೂಡ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಜೊತೆ ಇದ್ದಾಗಲೂ ಇಂತಹ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರ ಹೇಳಿಕೆ ಬಗ್ಗೆ ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು. ಠಾಕ್ರೆ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಮೃದು ಧೋರಣೆ ತೊರುತ್ತಿದ್ದಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಗಡಿ ವಿಚಾರ ಬಂದಾಗ ನಮ್ಮ ಪಕ್ಷದ ವತಿಯಿಂದ ಯಾವುದೇ ಮೃದು ಧೋರಣೆ ತೋರಿಲ್ಲ, ತೋರಿಸುವುದು ಇಲ್ಲ ಎಂದು ಹೇಳಿದರು.