ಎಸ್ಸಿ,ಎಸ್ಟಿ,ಹಿಂದುಳಿದ ವರ್ಗಗಳ ಬಡ್ತಿಯಲ್ಲಿ ಮೀಸಲಾತಿ ವಿಚಾರ: ಸುಪ್ರೀಂ ನಿಲುವು ಖಂಡಿಸಿ ಪ್ರತಿಭಟನೆ - ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ವತಿಯಿಂದ ಬೆಂಬಲಿಸಿ ಶಾಂತಿಯುತ ಹೋರಾಟ
🎬 Watch Now: Feature Video

ಹುಬ್ಬಳ್ಳಿ: ಎಸ್ಸಿ,ಎಸ್ಟಿ ಹಾಗು ಹಿಂದುಳಿದ ವರ್ಗಗಳ ಬಡ್ತಿಯಲ್ಲಿ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ ಆದೇಶ ಖಂಡಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳ ವತಿಯಿಂದ ಶಾಂತಿಯುತ ಪ್ರತಿಭಟನೆ ನಡೆಯಿತು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮತಾಸೇನಾ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.