ದಾವಣಗೆರೆಯಲ್ಲಿ ಶಾಲಾ ಆವರಣದಲ್ಲಿ ಮಕ್ಕಳಿಗೆ ಪಾಠ.. ವಿಡಿಯೋ - ದಾವಣಗೆರೆ ಜಿಲ್ಲೆಯಲ್ಲಿ ಶಾಲಾ ಕಾಲೇಜ್ ಆರಂಭ
🎬 Watch Now: Feature Video
ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾದಾಗ ಶಾಲೆಗಳನ್ನು ಬಂದ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಎಂಟು ತಿಂಗಳ ಬಳಿಕ ಕೊರೊನಾ ಇಳಿಮುಖ ಕಂಡ ಬಳಿಕ ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆ ಮೂಲಕ ಶಾಲೆಗಳನ್ನು ತೆರೆದು ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಿದೆ. ದಾವಣಗೆರೆಯ ಚಾಮುಂಡೇಶ್ವರಿ ಸಿನಿಮಾ ಮಂದಿರ ಬಳಿ ಇರುವ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾಗಮ ಮೂಲಕ ಶಾಲಾ ಆವರಣದಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿರುವುದು ಕಂಡು ಬಂದಿತು. ಮುಂಜಾಗ್ರತಾ ಕ್ರಮವಾಗಿ ಮಕ್ಕಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡುವ ಮೂಲಕ ಶಾಲೆಗೆ ಬರಮಾಡಿಕೊಳ್ಳಲಾಯಿತು.
Last Updated : Jan 1, 2021, 2:31 PM IST