ಕೊಪ್ಪಳದಲ್ಲೂ ರಸ್ತೆಗಿಳಿಯದ ಬಸ್ಗಳು.. ಪ್ರತ್ಯಕ್ಷ ವರದಿ - ಕೊಪ್ಪಳ ಜಿಲ್ಲೆಯಲ್ಲಿಯೂ ಮುಷ್ಕರ
🎬 Watch Now: Feature Video
ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ ಕೊಪ್ಪಳ ಜಿಲ್ಲೆಯಲ್ಲಿಯೂ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ಸಂಸ್ಥೆಗಳ ಬಸ್ಗಳ ಸಂಚಾರ ಇಂದು ಬೆಳಗ್ಗೆಯಿಂದಲೇ ಸ್ತಬ್ಧಗೊಂಡಿದ್ದು, ಕೊಪ್ಪಳ ಜಿಲ್ಲೆಯ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ಜಿಲ್ಲೆಯ ಐದು ಡಿಪೋಗಳಿಂದ ಬೆಳಗ್ಗೆಯಿಂದ 9 ಗಂಟೆಯ ವೇಳೆಗೆ ಒಟ್ಟು 120 ಬಸ್ಗಳು ಸಂಚರಿಸಬೇಕಿತ್ತು. ಆದರೆ, ಒಂದೇ ಒಂದು ಬಸ್ ಸಹ ರಸ್ತೆಗೆ ಇಳಿದಿಲ್ಲ. ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೋಗುತ್ತಿದ್ದಾರೆ. ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದ ಸ್ಥಿತಿ ಕುರಿತ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...