ಎರಡನೇ ಹಂತದ ಗ್ರಾಪಂ ಚುನಾವಣೆಗೆ ಮತದಾನ.. ಬೆಳಗಾವಿ ಜಿಲ್ಲೆ ಕುರಿತು ಪ್ರತ್ಯಕ್ಷ ವರದಿ - ಚಿಕ್ಕೋಡಿಯಲ್ಲಿ ಎರಡನೆ ಹಂತದ ಚುನಾವಣೆ
🎬 Watch Now: Feature Video
ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಏಳು ತಾಲೂಕುಗಳಲ್ಲಿ 2ನೇ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದೆ. ಸುಮಾರು 218 ಗ್ರಾಪಂಗಳಿಂದ 9,472 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಜಿಲ್ಲೆಯ ಕಾಗವಾಡ, ಅಥಣಿ, ಚಿಕ್ಕೋಡಿ, ನಿಪ್ಪಾಣಿ, ರಾಯಬಾಗ, ಸವದತ್ತಿ, ರಾಮದುರ್ಗ ತಾಲೂಕಿನ 218 ಗ್ರಾಪಂಗಳ 3,936 ಸದಸ್ಯ ಸ್ಥಾನಗಳಿಗೆ ಚುನಾವಣೆ ಘೊಷಣೆಯಾಗಿತ್ತು. ಈ ಪೈಕಿ 332 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. 17 ಸ್ಥಾನಗಳಿಗೆ ನಾಮಪತ್ರಗಳೆ ಸಲ್ಲಿಕೆಯಾಗಿಲ್ಲ. ಹೀಗಾಗಿ 3,587 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ..