ಕೊರೊನಾ ಕಳವಳ: ಶಿವಮೊಗ್ಗ ಜಿಲ್ಲೆಯಲ್ಲೂ 144 ಸೆಕ್ಷನ್ ಜಾರಿ - ಶಿವಮೊಗ್ಗ ಕೊರೊನಾ ವೈರಸ್ ನಿಷೇಧಾಜ್ಞೆ
🎬 Watch Now: Feature Video
ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮತ್ತೊಂದೆಡೆ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಭೀತಿ ಹಿನ್ನಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಕಲಂ 144(೧) ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಆದೇಶ ಹೋರಡಿಸಿದ್ದಾರೆ. ಇಂದಿನಿಂದ ಮಾರ್ಚ್ 25 ರವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನರು ನಿಲ್ಲದಂತೆ ಸೂಚಿಸಲಾಗಿದೆ. ಆದೇಶ ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದು, ಕೊರೊನಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಟ್ಟರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.