ಹಿರಿಯ ನಾಗರಿಕರ ಕ್ರೀಡಾಕೂಟ: 100 ಮೀಟರ್ ಓಟದ ಸ್ಪರ್ಧೆಯಲ್ಲಿ ಶಾಸಕ ನೆಹರು ಓಲೇಕಾರ್ ಭಾಗಿ - ಶಾಸಕ ನೆಹರು ಓಲೇಕಾರ್
🎬 Watch Now: Feature Video
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಹಾವೇರಿಯ ಮಾಗಾವಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ಕ್ರೀಡಾಕೂಟಕ್ಕೆ ಶಾಸಕ ನೆಹರು ಓಲೇಕಾರ್ ಚಾಲನೆ ನೀಡಿದರು. ಈ ಸ್ಪರ್ಧೆಯಲ್ಲಿ ಶಾಸಕರೂ ಭಾಗವಹಿಸಿ 100 ಮೀಟರ್ ಓಟದಲ್ಲಿ ಭಾಗವಹಿಸಿ ಓಡಿದರು. ಬಳಿಕ ಶಾಸಕ ನೆಹರು ಓಲೇಕಾರ್ ಮಾತನಾಡಿ, ವರ್ಷದಿಂದ ವರ್ಷಕ್ಕೆ ಕ್ರೀಡಾಕೂಟಕ್ಕೆ ಹಿರಿಯರ ಸಂಖ್ಯೆ ಹೆಚ್ಚಾಗುತ್ತಿರುವುದು ತಮಗೆ ಸಂತಸ ತಂದಿದೆ ಎಂದರು. ಹಿರಿಯರು ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.