ಬೀದರ್ನಲ್ಲಿ ಸಂತ ಸೇವಾಲಾಲ್ ಜಯಂತಿ: ಮಹಿಳೆಯರಿಂದ ಸಾಂಪ್ರದಾಯಿಕ ಡ್ಯಾನ್ಸ್...! - ಬೀದರ್ನಲ್ಲಿ ಸಂತ ಸೇವಾಲಾಲ್ ಜಯಂತಿ
🎬 Watch Now: Feature Video
ಬೀದರ್: ಬಂಜಾರಾ ಸಮುದಾಯದ ಸಂತ ಸೇವಾಲಾಲ ಮಹಾರಾಜರ ಜಯಂತಿ ಅಂಗವಾಗಿ ನೂರಾರು ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಸಾಮೂಹಿಕವಾಗಿ ಹೆಜ್ಜೆ ಹಾಕಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಡಿಸಿ ಡಾ.ಹೆಚ್.ಆರ್.ಮಹದೇವ, ಜಿ.ಪಂ ಅಧ್ಯಕ್ಷೆ ಗೀತಾ ಚಿದ್ರಿ ಅವರು ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಉತ್ಸವಕ್ಕೆ ಚಾಲನೆ ನೀಡಿದರು. ನಂತರ ಶಿವಾಜಿ ವೃತದಿಂದ ಅಂಬೇಡ್ಕರ ವೃತದ ಮೂಲಕ ಚನ್ನಬಸವ ಪಟ್ಟದ್ದೆವರು ರಂಗಮಂದಿರವರಗೆ ಸೇವಾಲಾಲ ಮಹಾರಾಜರ ಭಾವಚಿತ್ರದ ಮೆರವಣಿಗೆ ನಡೆಯಿತು.