ಶಾಮನೂರು ಶಿವಶಂಕರಪ್ಪ ಮಗನ ಕಾರ್ಗೆ ಬೈಕ್ ಡಿಕ್ಕಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸಾವು
🎬 Watch Now: Feature Video

ನೆಲಮಂಗಲ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಪುತ್ರ ಗಣೇಶ್ರವರ BMW ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟಿದ್ದಾನೆ. ಕಾರ್ ಬೈಕ್ಗೆ ಡಿಕ್ಕಿ ಹೊಡೆಯುವ ಎದೆ ಝಲ್ ಅನ್ನುವಂತ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನೆಲಮಂಗಲ ತಾಲೂಕಿನ ಜಿಂದಾಲ್ ಕಾರ್ಖಾನೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಹೊರಟ್ಟಿದ್ದ ಗಣೇಶ್ ಅವರ BMW ಕಾರಿಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಮೇಲಕ್ಕೆ ಹಾರಿ ಬಿದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ದಯಾನಂದ್ (60) ವರ್ಷ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.