ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ : ಶಶೀಲ್ ನಮೋಶಿ - Latest Press meet For The Shashi Namoshi
🎬 Watch Now: Feature Video
ಕಲಬುರಗಿ ಜೂನ್ ತಿಂಗಳಲ್ಲಿ ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಕೆಲ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ್ ನಮೋಶಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿಕಾರಿಗಳು ಕೆಲ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿದ್ದಾರೆ. ಪ್ರಸಕ್ತ ಚುನಾವಣೆಗೆ 20,756 ಶಿಕ್ಷಕರ ಹೆಸರು ಮಾತ್ರ ನೋಂದಣಿ ಮಾಡಿಸಿಕೊಳ್ಳಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿಯಾದರೂ ಅರ್ಜಿ ತಿರಸ್ಕರಿಸದೇ, ತಪ್ಪುಗಳನ್ನು ತಿದ್ದುಪಡಿ ಮಾಡಿ ಅರ್ಜಿ ಸ್ವೀಕರಿಸಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರಸ್ತೆಗೆಳಿದು ಪ್ರತಿಭಟನೆ ಮಾಡುವುದಾಗಿ ನಮೋಶಿ ಎಚ್ಚರಿಕೆ ನೀಡಿದ್ದಾರೆ.