ಎತ್ತುಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಖದೀಮರು ಆರೆಸ್ಟ್ - ಶಿಗ್ಗಾವಿ ಪೊಲೀಸ ಕಾರ್ಯಚರಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5015703-thumbnail-3x2-lek.jpg)
ಹಾವೇರಿ ಜಿಲ್ಲೆಯ ಸುತ್ತಮುತ್ತಲ ಹಳ್ಳಿಗಳಲ್ಲಿ ರೈತರ ಎತ್ತುಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಶಿಗ್ಗಾವಿ ಪೊಲೀಸರು ಬಂಧಿಸಿದ್ದಾರೆ. ದಾದಾಪೀರ ಕಡೇಮನಿ (33) , ಖಾದರಸಾಬ್ ಜಟಗೇರಿ (36), ಅಬ್ದುಲ್ ಸುತಾರ (34) ಬಂಧಿತರು. ಇವರಿಂದ ಒಂದೂವರೆ ಲಕ್ಷಕ್ಕೂ ಅಧಿಕ ರೂ. ಬೆಲೆಬಾಳುವ ನಾಲ್ಕು ಎತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಎತ್ತುಗಳ ಸಾಗಾಣಿಕೆಗೆ ಬಳಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ. ಶಿಗ್ಗಾವಿ ಮತ್ತು ತಡಸ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣಗಳು ದಾಖಲಾದ ಹಿನ್ನೆಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.