ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ: ಕೊರೊನಾ ಬಗ್ಗೆ ನೀಡಿದ್ರು ಮಾಹಿತಿ - ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ
🎬 Watch Now: Feature Video
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾಗೆ ಸಂಬಂಧಿಸಿದಂತೆ 151 ಜನರ ಮೇಲೆ ಇದುವರೆಗೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾಹಿತಿ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 151 ಮಂದಿಯಲ್ಲಿ 14ದಿನಗಳ ನಿಗಾ ಮುಗಿಸಿ ಎರಡನೇ ಹಂತದ ನಿಗಾಕ್ಕೆ 34 ಜನರು ಹೋಗಿದ್ದಾರೆ. ಇನ್ನು ಐಸೋಲೇಷನ್ ವಾರ್ಡ್ನಲ್ಲಿ ಒಬ್ಬ ವ್ಯಕ್ತಿ ಇರುವ ಕುರಿತು ಮಾಹಿತಿ ನೀಡಿದರು. ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ 18 ಜನರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಅದರಲ್ಲಿ 17 ಜನರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಇನ್ನೊಂದು ಪ್ರಕರಣದ ವರದಿ ಇನ್ನಷ್ಟೇ ಬರಬೇಕಿದೆ ಎಂದು ತಿಳಿಸಿದರು.