ಕರ್ನಾಟಕ ಬಂದ್: ಶಿವಮೊಗ್ಗ ಜಿಲ್ಲೆಯಲ್ಲಿ ಸಿಗದ ಬೆಂಬಲ - ಎಪಿಎಂಸಿ ಕಾಯ್ದೆ ತಿದ್ದುಪಡಿ ಸುದ್ದಿ
🎬 Watch Now: Feature Video
ಶಿವಮೊಗ್ಗ: ಎಪಿಎಂಸಿ ಕಾಯ್ದೆ ಸೇರಿದಂತೆ ಇನ್ನಿತರೆ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಕಾರ್ನಾಟಕ ಬಂದ್ಗೆ ಜಿಲ್ಲೆಯಲ್ಲಿ ಸರಿಯಾದ ಬೆಂಬಲ ವ್ಯಕ್ತವಾಗಿಲ್ಲ. ಬೆಳಗ್ಗೆಯಿಂದಲೇ ಸರ್ಕಾರಿ ಸಾರಿಗೆ ಹಾಗೂ ಖಾಸಗಿ ಸಾರಿಗೆ ಸಂಚಾರ ನಡೆಯುತ್ತಿದೆ. ಅಲ್ಲದೆ ಆಟೋ ಸಂಚಾರ ಕೂಡ ನಡೆಯುತ್ತಿದೆ. ಅಲ್ಲಲ್ಲಿ ಅಂಗಡಿ ಮುಂಗಟ್ಟು ತೆರೆದಿವೆ. ಅಲ್ಲದೆ ನಾಯಕ ಹೂವಿನ ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಬೆಳಗ್ಗೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಿ.ಹೆಚ್. ರಸ್ತೆ, ನೆಹರು ರಸ್ತೆ, ಗೋಪಿ ವೃತ್ತದ ಮೂಲಕ ಬಾಲರಾಜ್ ಅರಸ್ ರಸ್ತೆಯ ಮೂಲಕ ಡಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ರೈತ ಸಂಘಕ್ಕೆ ಜಿಲ್ಲಾ ಕಾಂಗ್ರೆಸ್, ಜಿಲ್ಲಾ ಜೆಡಿಎಸ್, ಎಸ್ಡಿಪಿಐ, ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿವೆ.