ಟಿ.ಬಿ.ಜಯಚಂದ್ರ ಪರ ಕಾಂಗ್ರೆಸ್ ಮುಖಂಡರಿಂದ ಬಿರುಸಿನ ಪ್ರಚಾರ - Tumakuru campaign by Congress leaders
🎬 Watch Now: Feature Video
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು ಕಾಂಗ್ರೆಸ್ ಮುಖಂಡರ ದಂಡೆ ಆಗಮಿಸಿ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರ ಗ್ರಾಮೀಣ ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರಾದ ಆರ್.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಜಿ. ಪರಮೇಶ್ವರ್ ಸೇರಿದಂತೆ ಅನೇಕ ಮುಖಂಡರು ಮತಬೇಟೆ ಮಾಡಿದರು. ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಳ್ಳಂಬೆಳ್ಳ ಗ್ರಾಮ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಕೈ ನಾಯಕರು ಬಿರುಸಿನಿಂದ ಕ್ಯಾಂಪೇನ್ ಮಾಡಿದರು.