ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ಹಿಂಪಡೆಯಲೇಬೇಕು: ಶಿವಸೇನೆ ಒತ್ತಾಯ - ಶಿವಸೇನೆ ರಾಜ್ಯಾಧ್ಯಕ್ಣ ಕುಮಾರ್ ಹಕ್ಕಾರಿ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7623067-592-7623067-1592207643354.jpg)
ಹುಬ್ಬಳ್ಳಿ : ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ಹಿಂಪಡೆಯಬೇಕು. ಆನ್ಲೈನ್ ಶಿಕ್ಷಣ ರದ್ದುಗೊಳಿಸಬೇಕು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಶಿವಸೇನೆ ರಾಜ್ಯಾಧ್ಯಕ್ಷ ಕುಮಾರ್ ಹಕ್ಕಾರಿ ಒತ್ತಾಯಿಸಿದರು. ಸರ್ಕಾರ ಜಾರಿಗೆ ತರುತ್ತಿರುವ ಭೂ ಸುಧಾರಣಾ ಕಾಯ್ದೆ ರೈತ ವಿರೋಧಿಯಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಅನುಕೂಲವಾಗಲಿದ್ದು, ಕೂಡಲೇ ಈ ಕಾಯ್ದೆಯನ್ನು ಸರ್ಕಾರ ಕೈ ಬಿಡಬೇಕು. ಸರ್ಕಾರ ಆನ್ ಲೈನ್ ಶಿಕ್ಷಣವನ್ನು ರದ್ದು ಮಾಡಬೇಕು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.