ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ: ಮಳೆಯಲ್ಲೇ ಆಟವಾಡಿದ ಮಕ್ಕಳು - ಶಿವಮೊಗ್ಗ ರಾಜ್ಯ ಮಟ್ಟದ ಕ್ರೀಡಾಕೂಟ ಪ್ರಾರಂಭ
🎬 Watch Now: Feature Video
ಶಿವಮೊಗ್ಗ: ನಗರದ ನೆಹರು ಸ್ಟೇಡಿಯಂನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಶಿವಮೊಗ್ಗ ಮತ್ತು ಡಿವಿಎಸ್ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಪ್ರಾರಂಭಗೊಂಡಿದೆ. ಕ್ರೀಡಾಕೂಟದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ 2100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಮಳೆ ಸುರಿಯುತ್ತಿರುವುದರಿಂದ ಕ್ರೀಡಾಂಗಣದಲ್ಲಿ ನೀರು ನಿಂದಿದ್ದು, ಅದರಲ್ಲೇ ವಿದ್ಯಾರ್ಥಿಗಳು ಆಟ ಆಡಿದರು.