ಬಂಡಾಯದಿಂದ ಬಂದವರನ್ನು ಟ್ರ್ಯಾಪ್ ಮಾಡಲಾಗುತ್ತಿದೆ: ಶಿವರಾಮ್ ಹೆಬ್ಬಾರ್
🎬 Watch Now: Feature Video
ಕಾರವಾರ: ಬಂಡಾಯಕ್ಕೂ ಇದಕ್ಕೂ ಸಂಬಂಧವಿಲ್ಲ, ಬಂಡಾಯದಿಂದ ಬಂದವರನ್ನು ಟ್ರ್ಯಾಪ್ ಮಾಡಲಾಗುತ್ತಿದೆ ಎಂದು ರಮೇಶ್ ಜಾರಕಿಹೊಳಿಯನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸಮರ್ಥಿಸಿಕೊಂಡಿದ್ದಾರೆ. ಕುಮಟಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವೆಲ್ಲವೂ ಸತ್ಯಕ್ಕೆ ದೂರವಾದ ವಿಚಾರ. ಬಂಡಾಯದಿಂದ ಬಂದವರನ್ನು ಟ್ರ್ಯಾಪ್ ಮಾಡಲಾಗುತ್ತಿದೆ. ಇದಕ್ಕೂ ಬಂಡಾಯಕ್ಕೂ ಸಂಬಂಧವಿಲ್ಲ. ಬಂಡಾಯ ಮುಗಿದ ಅಧ್ಯಾಯ. ನಾವೀಗ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.