ರಾಯಚೂರಲ್ಲಿ ಮಹಾ ಶಿವರಾತ್ರಿ ಸಂಭ್ರಮ... ಭಕ್ತರಿಂದ ಶಿವನ ಆರಾಧನೆ - ರಾಯಚೂರಿನಲ್ಲಿ ಶಿವರಾತ್ರಿ ಹಬ್ಬ

🎬 Watch Now: Feature Video

thumbnail

By

Published : Feb 21, 2020, 9:45 PM IST

ರಾಯಚೂರು ಜಿಲ್ಲೆಯಾದ್ಯಂತ ಮಹಾ ಶಿವರಾತ್ರಿಯನ್ನು ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಮುಂಜಾನೆಯಿಂದಲೂ ಶಿವನ ದೇವಾಲಯಗಳಲ್ಲಿ ರುದ್ರಾಭಿಷೇಕ, ಕ್ಷೀರಾಭಿಷೇಕ, ಮಹಾಪೂಜೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಶಿವನ ದರ್ಶನಕ್ಕಾಗಿ ದೇವಾಲಯಗಳಿಗೆ ಬೆಳಿಗ್ಗೆಯಿಂದಲೇ ಶಿವನ ಆರಾಧಕರು, ಹಣ್ಣು-ಹಂಪಲು, ತೆಂಗಿನಕಾಯಿ, ಕರ್ಪೂರ ಹಿಡಿದು ದೇವಾಲಯಗಳಲ್ಲಿ ಸರತಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ರು. ಮಹಾ ಶಿವರಾತ್ರಿ ಹಿನ್ನೆಲೆ ಉಪವಾಸ ವ್ರತ ಮಾಡಲಿದ್ದು, ರಾತ್ರಿಯಿಡೀ ಜಾಗರಣೆ ಮಾಡಲಿದ್ದಾರೆ. ವಿವಿಧ ದೇವಾಲಯಗಳಲ್ಲಿ ಭಜನೆ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.