ಡಿಸಿ ಆದೇಶ ಉಲ್ಲಂಘಿಸಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ತೆರೆದ ಅಂಗಡಿಗಳು - ಕೊರೊನಾ ಎಫೆಕ್ಟ್
🎬 Watch Now: Feature Video
ಮಂಡ್ಯ: ಕೊರೊನಾ ನಿಗ್ರಹಕ್ಕಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಆದರೆ ಹೆದ್ದಾರಿ ಬದಿಯಿರುವ ವ್ಯಾಪಾರಿಗಳು ತಮ್ಮ ಲಾಭಕ್ಕಾಗಿ ನಿಯಮವನ್ನೇ ಉಲ್ಲಂಘನೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಬೆಂಗಳೂರು-ಮೈಸೂರು ಹೆದ್ದಾರಿಯ ಡಾಬಾಗಳು ತೆರೆದಿವೆ. ಈ ಹೆದ್ದಾರಿಯಲ್ಲಿ ವಿದೇಶಿಗರ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 29ರ ವರೆಗೂ ಮಂಡ್ಯ ಜಿಲ್ಲಾಧಿಕಾರಿ ವ್ಯಾಪಾರ-ವಹಿವಾಟು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಡಾಬಾ, ಹೋಟೆಲ್, ಅಂಗಡಿಗಳು, ಹಣ್ಣಿನ ವ್ಯಾಪಾರ ಸೇರಿದಂತೆ ಎಲ್ಲಾ ಅಂಗಡಿಗಳ ವ್ಯಾಪಾರ ನಿರ್ಬಂಧಿಸಿ ಆದೇಶ ಹೊರಡಿಸಿದ್ದರೂ, ಇದಕ್ಕೂ ತಮಗೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ ವ್ಯಾಪಾರಿಗಳು.