ಬೆಂಗಳೂರಿನ ಇಸ್ಕಾನ್ನಲ್ಲಿ ಕಳೆಗಟ್ಟಿದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ - janmashtami celebration
🎬 Watch Now: Feature Video
ಬೆಂಗಳೂರು: ನಗರದ ಇಸ್ಕಾನ್ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಇಂದು ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಬೆಳಗಿನ ನಾಲ್ಕು ಗಂಟೆಯಿಂದಲೇ ಆರಂಭವಾಗಿರುವ ವಿಶೇಷ ಪೂಜೆ-ಪುನಸ್ಕಾರಗಳು ಮಧ್ಯೆರಾತ್ರಿ ಹನ್ನೆರಡು ಗಂಟೆಯವರೆಗೆ ನಡೆಯಲಿವೆ. ಬೆಳಗ್ಗೆಯಿಂದಲೇ ಭಕ್ತ ಸಮೂಹ ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದು, ಕೃಷ್ಣನ ದರ್ಶನ ಪಡೆಯುತ್ತಿದ್ದಾರೆ.