ಶಿರಸಿಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಠಮಿ - Sri Sri Vishwallabha Theertha Sripadaru
🎬 Watch Now: Feature Video
ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸೋದೆ ಶ್ರೀ ವಾದಿರಾಜ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಸಂಸ್ಥಾನದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ರಾತ್ರಿ ಚಂದ್ರೋದಯ ಕಾಲದಲ್ಲಿ ಶ್ರೀಕೃಷ್ಣ ದೇವರಿಗೆ ಅರ್ಘ್ಯಪ್ರದಾನ ಮಾಡಲಾಯಿತು. ಸಾಯಂಕಾಲ ವಿಟ್ಲಪಿಂಡಿ ಉತ್ಸವದ ಪ್ರಯುಕ್ತ ರಮಾತ್ರಿವಿಕ್ರಮ ದೇವರ ಪಲ್ಲಕಿ ಉತ್ಸವ ವಾದ್ಯ ಘೋಷಗಳೊಂದಿಗೆ ರಥಬೀದಿಯಲ್ಲಿ ಜರುಗಿದೆ.