ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ; ಮಾಜಿ ಸಚಿವ ಶ್ರೀನಿವಾಸ್ ಲೇವಡಿ - JDS Treaty with BJP
🎬 Watch Now: Feature Video

ತುಮಕೂರು: ತಮ್ಮ ಪಕ್ಷದವರೇ ತನ್ನನ್ನು ಸೋಲಿಸಿದರು ಎಂಬ ಸಿದ್ದರಾಮಯ್ಯ ಹೇಳಿಕೆಯು ದೇಶಕ್ಕೆ ಗೊತ್ತಿದೆ, ಸಿದ್ದರಾಮಣ್ಣರಿಗೆ ಈಗ ಜ್ಞಾನೋದಯವಾಗಿದೆ ಎಂದು ಮಾಜಿ ಸಚಿವ ಎಸ್.ಆರ್ ಶ್ರೀನಿವಾಸ್ ಲೇವಡಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಅಕ್ಷರಶಃ ಸತ್ಯ, ಅದೊಂದೇ ಕ್ಷೇತ್ರವಲ್ಲ. ಸುಮಾರು ಕ್ಷೇತ್ರಗಳಲ್ಲಿ ಬಿಜೆಪಿ ಜೊತೆ ನಾವು ಒಡಂಬಡಿಕೆ ಮಾಡಿಕೊಂಡು ಚುನಾವಣೆ ಮಾಡಿದ್ದೇವೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ ಇದರಲ್ಲಿ ಹೊಸದೇನಿದೆ. ನಾನು ಯಾವ ಪಕ್ಷಕ್ಕೂ ಹೋಗುತ್ತಿಲ್ಲ. ನನಗೆ ರಾಜಕೀಯವಾಗಿ ಬೇಜಾರ್ ಆಗಿದೆ, ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಅಸಮಾಧಾನ ಇದೆ ಎಂದರು.