ನನ್ನ ಹೆಸರಲ್ಲೇ ರಾಮನಿದ್ದಾನೆ, ಶ್ರೀರಾಮನನ್ನು ನೀವು ಗುತ್ತಿಗೆ ತೆಗೆದುಕೊಂಡಿದ್ದೀರೇನ್ರೀ: ಸಿದ್ದರಾಮಯ್ಯ - ವಿಧಾನಸಭೆಯಲ್ಲಿ ಸಿದ್ದರಾಮಯ್ಯ
🎬 Watch Now: Feature Video
ವಿಧಾನಸಭೆಯಲ್ಲಿ ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಹ್ಮಣ್ಯಸ್ವಾಮಿ ಟ್ವೀಟ್ ಉಲ್ಲೇಖಿಸಿದ ಸಿದ್ದರಾಮಯ್ಯ, ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ಲೀ.ಗೆ 93, ಸೀತೆಯ ನೇಪಾಳದಲ್ಲಿ 51 ರೂ., ರಾವಣನ ಲಂಕಾದಲ್ಲಿ 53 ರೂ. ಎಂದು ತಿಳಿಸಿ ಗಮನ ಸೆಳೆದರು. ಈ ವೇಳೆ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಎಂದು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿದರು. ನಿಮ್ಮ ಬಾಯಲ್ಲಿ ಜೈ ಶ್ರೀರಾಮ್ ಕೇಳೋದೇ ಚೆಂದ ಎಂದು ಬೊಮ್ಮಾಯಿ ಕಾಲೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಶ್ರೀರಾಮನನ್ನು ನೀವು ಗುತ್ತಿಗೆ ತೆಗೆದುಕೊಂಡಿದ್ದೀರೇನ್ರೀ. ನನ್ನ ಹೆಸರಿನಲ್ಲೇ ರಾಮ ಇದೆ. ನಮ್ಮೂರಿನಲ್ಲಿ ರಾಮಮಂದಿರಕ್ಕೆ ನಾನು ಹಣ ಕೊಟ್ಟಿದ್ದೇನೆಂದು ಹೇಳಿದರು.