ಸಾರಿಗೆ ನೌಕರರ ಪ್ರತಿಭಟನೆಗೆ ಸಿದ್ದರಾಮಯ್ಯ ಸಾಥ್: ಸಮಸ್ಯೆ ಪರಿಹಾರದ ಭರವಸೆ - ಸಾರಿಗೆ ನೌಕರರ ಪ್ರತಿಭಟನೆ
🎬 Watch Now: Feature Video
ಬಾಗಲಕೋಟೆ: ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ಸೂಚಿಸಿದರು. ಸರ್ಕಾರಿ ನೌಕರರೆಂದು ಪರಿಗಣನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹಾಗೂ ಸಿಎಂ ಜೊತೆ ಮಾತನಾಡಿ ಕೂಡಲೇ ನಿಮ್ಮ ಸಮಸ್ಯೆ ಬಗೆಹರಿಸುವಂತೆ ಒತ್ತಾಯ ಮಾಡುತ್ತೇನೆ ಎಂದು ಭರವಸೆ ನೀಡಿದರು.
Last Updated : Dec 12, 2020, 5:09 PM IST