ಸಿದ್ದಾರೂಢ ಸ್ವಾಮೀಜಿ ಪುಣ್ಯ ಸ್ಮರಣೆ: ಟ್ರಸ್ಟ್ ಕಮಿಟಿ ಆಶ್ರಯದಲ್ಲಿ ತೆಪ್ಪೋತ್ಸವ - ಸಿದ್ದಾರೂಢ ಸ್ವಾಮೀಜಿಯ ಪುಣ್ಯ ಸ್ಮರಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4155175-thumbnail-3x2-hbl.jpg)
ಹುಬ್ಬಳ್ಳಿ: ಸಿದ್ದಾರೂಢ ಸ್ವಾಮೀಜಿಯ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ನಗರದ ಸಿದ್ದರೂಢ ಮಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಟ್ರಸ್ಟ್ ಕಮಿಟಿ ಆಶ್ರಯದಲ್ಲಿ ತೆಪ್ಪೋತ್ಸವ ಜರುಗಿತು. ಸಾವಿರಾರು ಭಕ್ತರು ತೆಪ್ಪೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಸಿದ್ದರೂಢ ಶ್ರೀಗಳ ಕೃಪೆಗೆ ಪಾತ್ರರಾದರು.ಕಲ್ಯಾಣಿಯಲ್ಲಿ ತೇರು ಐದು ಸುತ್ತು ಪ್ರದಕ್ಷಿಣೆ ಹಾಕಿತು. ಕಲ್ಯಾಣಿಯ ಸುತ್ತ ಕಿಕ್ಕಿರಿದು ಸೇರಿದ ಭಕ್ತರು ಉತ್ತತ್ತಿ, ಬಾಳೆಹಣ್ಣು, ಲಿಂಬೆಹಣ್ಣು ಎಸೆದು ಸ್ವಾಮಿ ಆಶ್ರೀರ್ವಾದ ಪಡೆದು ಕೃತಾರ್ಥರಾದರು.ರಾಜ್ಯ ಅಲ್ಲದೇ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶದಿಂದ ಆಗಮಿಸಿದ ಭಕ್ತರು ಜಲರಥೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಸಿದ್ದಾರೂಢರ ಶ್ರೀಗಳ ಆಶ್ರೀರ್ವಾದ ಪಡೆದುಕೊಂಡರು.