ಹೈದರಾಬಾದ್ನಲ್ಲಿ ನಡೆದ ಪೈಶಾಚಿಕ ಕೃತ್ಯ ಖಂಡಿಸಿ ತುಮಕೂರಲ್ಲಿ ಪಶುವೈದ್ಯರಿಂದ ಮೌನ ಪ್ರತಿಭಟನೆ - silent protest by veternary doctors news
🎬 Watch Now: Feature Video

ಹೈದರಾಬಾದ್ನಲ್ಲಿ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ತುಮಕೂರಿನಲ್ಲಿ ಪಶುವೈದ್ಯರು ಮೌನ ಪ್ರತಿಭಟನೆ ನಡೆಸಿದರು. ಈ ಘಟನೆಯ ನಂತರ ಮಹಿಳಾ ಪಶುವೈದ್ಯರು ಗ್ರಾಮೀಣ ಪ್ರದೇಶಕ್ಕೆ ತೆರಳಿ ತಮ್ಮ ಕರ್ತವ್ಯ ನಿಭಾಯಿಸಲು ಸಾಕಷ್ಟು ಆತಂಕ ಎದುರಾಗಿದೆ. ಇದನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಜೊತೆಗೆ ಪಶುವೈದ್ಯೆ ಸಾವಿಗೆ ನ್ಯಾಯ ಒದಗಿಸಬೇಕು ಮತ್ತು ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು.