ಶಿರಾ ಉಪಚುನಾವಣೆ: ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಕೆ - tumkur
🎬 Watch Now: Feature Video
ತುಮಕೂರು: ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಬಿಜೆಪಿ ಪಕ್ಷದಿಂದ ಬೃಹತ್ ಮೆರವಣಿಗೆ ಮೂಲಕ ಅಭ್ಯರ್ಥಿ ರಾಜೇಶ್ ಗೌಡ ನಾಮಪತ್ರ ಸಲ್ಲಿಸಿದರು. ಶಿರಾ ಪಟ್ಟಣದಲ್ಲಿ ಗವಿ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಶಿರಾ ಪಟ್ಟಣದಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿ ಮಿನಿ ವಿಧಾನಸೌಧದಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಮೆರವಣಿಗೆಯಲ್ಲಿ ಬಿ.ವೈ ವಿಜಯೇಂದ್ರ, ಉಪ ಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ ಭಾಗವಹಿಸಿದ್ದರು.