ಶಿರಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಿಂದ ಮನೆಮನೆ ಪ್ರಚಾರ - BJP candidate Campaign
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9236118-790-9236118-1603115854461.jpg)
ತುಮಕೂರು: ಶಿರಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಇಂದು ಕಳ್ಳಂಬೆಳ್ಳ ಹೋಬಳಿಯ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಭೂಪಸಂದ್ರ, ಕಳ್ಳಂಬೆಳ್ಳ, ಚಿಕ್ಕನಹಳ್ಳಿ, ತರೂರು ಗ್ರಾಮಗಳಲ್ಲಿ ಮನೆ ಮನೆ ಭೇಟಿ ನೀಡಿ ಮತಯಾಚಿಸಿದರು. ಪ್ರಚಾರಕ್ಕೆ ಹೋದಲ್ಲೆಲ್ಲ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದಾರೆ. ಇದರಿಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಸದೃಢವಾಗಿ ಹೊರಹೊಮ್ಮುಲಿದೆ ಎಂದು ಡಾ.ಸಿ.ಎಂ.ರಾಜೇಶ್ ಗೌಡ ವಿಸ್ವಾಸ ವ್ಯಕ್ತಪಡಿಸಿದರು.