ಕಲಬುರಗಿ: ಅಗ್ನಿ ಅನಾಹುತ, ಸುಟ್ಟು ಕರಕಲಾದ ಚಪ್ಪಲಿ ಅಂಗಡಿಗಳು - fire by accident Kalaburagi
🎬 Watch Now: Feature Video
ಕಲಬುರಗಿ: ಚಪ್ಪಲಿ ಅಂಗಡಿಗಳಲ್ಲಿ ಅಗ್ನಿ ದುರಂತ ಸಂಭವಿಸಿದ ಘಟನೆ ನಗರದ ಸೂಪರ್ ಮಾರುಕಟ್ಟೆ ಪ್ರದೇಶದಲ್ಲಿನ ಫುಟ್ವೇರ್ ಬಜಾರ್ ನಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಮೂರು ಚಪ್ಪಲಿ ಅಂಗಡಿಗಳು ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರೋ ಶಂಕೆ ವ್ಯಕ್ತವಾಗಿದೆ. ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಚಪ್ಪಲಿ, ಶೂಗಳು ಸುಟ್ಟು ಕರಕಲಾಗಿದ್ದು, ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.