ಸ್ಮಾರ್ಟ್ ಸಿಟಿ ಕಾಮಗಾರಿಯ ಸಾಮಗ್ರಿಗಳು ಬೆಂಕಿಗಾಹುತಿ.... ಅಪಾರ ನಷ್ಟ - ತುಮಕೂರು ಸ್ಮಾರ್ಟ್ ಸಿಟಿ ಕಾಮಗಾರಿಯ ಸಾಮಗ್ರಿ ಬೆಂಕಿಗಾಹುತಿ
🎬 Watch Now: Feature Video
ತುಮಕೂರು: ಸ್ಮಾರ್ಟ್ ಸಿಟಿ ಕಾಮಗಾರಿಗೆ ಸಂಗ್ರಹಿಸಿಡಲಾಗಿದ್ದ ಸಾಮಗ್ರಿಗಳು ನಿನ್ನೆ ರಾತ್ರಿ ಬೆಂಕಿಗಾಹುತಿಗೆ ಆಗಿದೆ. ಸುಮಾರು 10 ಲಕ್ಷ ರೂ. ಮೌಲ್ಯದ ಸಾಮಗ್ರಿಗಳು ಎಂದು ಅಂದಾಜಿಸಲಾಗಿದ್ದು, ಈ ಸಾಮಗ್ರಿಗಳು ಒಳಚರಂಡಿ ಕಾಮಗಾರಿ ನಡೆಸುತ್ತಿರೋ ಗುತ್ತಿಗೆದಾರರಿಗೆ ಸೇರಿದ್ದಾಗಿದೆ. ಇದರಲ್ಲಿ ಪಿವಿಸಿ ಪೈಪ್ಗಳೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇತ್ತು. ಬೆಂಕಿ ಬಿದ್ದ ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸುಮಾರು 1 ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸಲು ಸಿಬ್ಬಂದಿಗಳು ಶ್ರಮಿಸಿದರು.