ಶಿವಮೊಗ್ಗದ ಕೋಟೆ ಸೀತಾರಾಮಾಂಜನೇಯನಿಗೆ ವಿಶೇಷ ಪೂಜೆ - ಕೋಟೆ ಆಂಜನೇಯ
🎬 Watch Now: Feature Video
ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿದ ಹಿನ್ನೆಲೆ, ಶಿವಮೊಗ್ಗ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಶ್ರೀ ರಾಮಾತಾರಕ್ ಹೋಮ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದು, ಸಂಸದ ಬಿ.ವೈ.ರಾಘವೇಂದ್ರ ಸಹ ಕೋಟೆ ಶ್ರೀ ಸೀತಾರಾಂಜನೇಯಸ್ವಾಮಿ ದೇವಾಲಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನುಳಿದಂತೆ ಸಾರ್ವಜನಿಕರು ಸಹ ಈ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ದರು