ಆಯನೂರು ಮಂಜುನಾಥ್ ಶೀಘ್ರ ಕೊರೊನಾ ಮುಕ್ತರಾಗಲು ವಿಶೇಷ ಪೂಜೆ - ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್
🎬 Watch Now: Feature Video
ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರಿಸಿದ್ದು ಅದರಂತೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಬಾಳೆಹೊನ್ನೂರು ರಂಭಾಪುರಿ ಶ್ರೀಗಳಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನ ಸೋಂಕಿನಿಂದ ಬೇಗ ಗುಣಮುಖರಾಗಿ ರಾಜ್ಯದ ಜನರ ಸೇವೆ ಮಾಡಲಿ ಎಂದು ವೀರಶೈವ ಸಮಾಜದ ವತಿಯಿಂದ ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದ ಆವರಣದಲ್ಲಿರುವ ಶಿವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.