ರಾಯಚೂರಿನಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ - ಸಿದ್ದರಾಮೇಶ್ವರ ಜಯಂತಿ ಆಚರಣೆ ರಾಯಚೂರು
🎬 Watch Now: Feature Video
ರಾಯಚೂರು: ಜಿಲ್ಲೆಯಾದ್ಯಂತ ಇಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಗಿದೆ. ನಗರದ ಆಶಾಪುರ ರಸ್ತೆಯ ಬಳಿ ಶ್ರೀ ಸಿದ್ದರಾಮೇಶ್ವರ ಪುತ್ಥಳಿಗೆ ಮಾಲಾರ್ಪಣೆ ನೇರವೇರಿಸುವ ಮೂಲಕ ಜಯಂತಿಗೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್ ಹಾಗೂ ಶಾಸಕರಾದ ಡಾ.ಶಿವರಾಜ್ ಪಾಟೀಲ್, ನಗರಸಭೆ ಹಿರಿಯ ಸದಸ್ಯ ಜಯಣ್ಣ ಸೇರಿದಂತೆ ಬೋವಿ ಸಮಾಜದ ಮುಖಂಡರು, ಸಮುದಾಯದ ಜನರು ಭಾಗವಹಿಸಿದ್ದರು.