ಶ್ರೀರಾಮ ಸೇನೆ ಕಾರ್ಯಕರ್ತರಿಂದ ಕೆರೆ ಆವರಣ ಸ್ವಚ್ಛತೆ
🎬 Watch Now: Feature Video
ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಕೆರೆಯ ಸುತ್ತಮುತ್ತ ಬಿಸಾಡಲಾಗಿದ್ದ ಮದ್ಯದ ಬಾಟಲಿಗಳು ಹಾಗೂ ತ್ಯಾಜ್ಯ ವಸ್ತುಗಳನ್ನು ಶ್ರಿ ರಾಮಸೇನೆಯ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಸ್ವಚ್ಛಗೊಳಿಸಿದ್ದಾರೆ. ಮದ್ಯಪಾನ ಮಾಡದಂತೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಸಾರಾಯಿ ಮಾರಾಟ ಮಾಡಿದವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಾರ್ಯಕರ್ತರು ಮನವಿ ಮಾಡಿದರು.