ಯಾದಗಿರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ: ಮುಂಜಾಗ್ರತಾ ಕ್ರಮ ಕೈಗೊಂಡ ಜಿಲ್ಲಾಡಳಿತ - ಎಸ್ಎಸ್ಎಲ್ಸಿ ಪರೀಕ್ಷೆ
🎬 Watch Now: Feature Video
ಇಂದಿನಿಂದ ಪ್ರಾರಂಭಗೊಂಡಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಎಲ್ಲ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವ ಮೂಲಕ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾದ್ಯಂತ 59 ಪರೀಕ್ಷಾ ಕೇಂದ್ರಗಳನ್ನ ಸ್ಥಾಪಿಸಲಾಗಿದ್ದು, 17,396 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯುತ್ತಿದ್ದಾರೆ. ಅಲ್ಲದೇ ಕಂಟೇನ್ಮೆಂಟ್ ಝೋನ್ನಲ್ಲಿದ್ದ 329 ವಿದ್ಯಾರ್ಥಿಗಳು ಇಂದು ಪರೀಕ್ಷೆ ಎದುರಿಸುತ್ತಿದ್ದಾರೆ. ಇವರು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.