ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಸಿಡಿದೆದ್ದ ರಾಜ್ಯ ಕಾಂಗ್ರೆಸ್ ನಾಯಕರು: ದಿನದ ಬೆಳವಣಿಗೆ ಹೀಗಿದೆ - Congress protest against agriculture acts
🎬 Watch Now: Feature Video
ಬೆಂಗಳೂರು: ಕೃಷಿ ಸಂಬಂಧಿತ ಮೂರು ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ 57 ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಇಂದು ರಾಜಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸುವ ಮೂಲಕ ಶಕ್ತಿ ಪ್ರದರ್ಶನ ತೋರಿಸಿದ್ರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು. ಸಾವಿರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.