ಕಂಬಳ ಓಟಗಾರ ಶ್ರೀನಿವಾಸ ಗೌಡರಿಗೆ ಬಿಎಸ್ವೈ ಸನ್ಮಾನ.. ಕ್ರೀಡಾಕೂಟಕ್ಕೆ ಸಂಪೂರ್ಣ ಖರ್ಚು ಭರಿಸುವ ಭರವಸೆ - ಕಂಬಳ ಓಟಗಾರ ಶ್ರೀನಿವಾಸ ಗೌಡರಿಗೆ ರಾಜ್ಯ ಸರ್ಕಾರದಿಂದ ಸನ್ಮಾನ
🎬 Watch Now: Feature Video

ಬೆಂಗಳೂರು: ಕಂಬಳ ಓಟದ ವೀರ ಶ್ರೀನಿವಾಸ ಗೌಡ ಅವರಿಗೆ ಅಗತ್ಯ ತರಬೇತಿ ನೀಡುವ ಜೊತೆಗೆ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಕಳುಹಿಸಿಕೊಡುವವರೆಗೂ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರು ಪೇಟ ತೊಡಿಸಿ ಶ್ರೀನಿವಾಸ ಗೌಡರನ್ನು ಸನ್ಮಾನಿಸಿದರು. ಸಚಿವರಾದ ಸಿ.ಟಿ ರವಿ, ಶಿವರಾಮ್ ಹೆಬ್ಬಾರ್ ಉಪಸ್ಥಿತರಿದ್ದರು.