ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಗ್ರಾ. ಪಂ. ನೌಕರರ ಪ್ರತಿಭಟನೆ - ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಪ್ರತಿಭಟನೆ
🎬 Watch Now: Feature Video

ಶಿವಮೊಗ್ಗ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಗ್ರಾ.ಪಂ.ನ ವಿವಿಧ ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಯಾವುದೇ ಉದ್ಯೋಗ ಭದ್ರತೆ ಇಲ್ಲ. ಸರಿಯಾದ ಸಂಬಳ ಸಿಗುತ್ತಿಲ್ಲ. ಕೂಡಲೇ ಸರ್ಕಾರ ನೌಕರರಿಗೆ 21,000 ಕನಿಷ್ಠ ಸಂಬಳ ನೀಡಬೇಕು. ಪಂಚಾಯಿತಿ ಸಿಬ್ಬಂದಿಗೆ ಸೇವಾ ಪುಸ್ತಕ ಇಡಬೇಕು. ಅಕ್ರಮ ನೇಮಕಾತಿ ರದ್ದುಗೊಳಿಸಿ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಆಗ್ರಹಿಸಿದರು.