ಡಿಕೆಶಿ ಬಂಧನ ವಿರೋಧಿಸಿ ಗಲಾಟೆ ಹತೋಟಿಯಲ್ಲಿದೆ: ಗೃಹಸಚಿವ ಬೊಮ್ಮಾಯಿ ಘೋಷಣೆ - ed arrest d.k. shivakumar
🎬 Watch Now: Feature Video
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆದಿದೆ. ಕೆಲವು ಕಡೆ ಕಲ್ಲು ತೂರಾಟ ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಬಸ್ಗಳಿಗೂ ಬೆಂಕಿ ಹಚ್ಚಲಾಗಿದೆ. ಈಗ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಪೊಲೀಸರು ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ನಾಳೆ ರಾಮನಗರ ಬಂದ್ಗೆ ಕರೆ ಕೊಟ್ಟಿದ್ದಾರೆ. ನಾಳೆ ಶಾಂತಿಯುತ ಬಂದ್ ನಡೆಸುವಂತೆ ಮನವಿ ಮಾಡಿದ್ದೇವೆ. ಪೊಲೀಸರು ನಾಳೆಯೂ ಸಹ ಪರಿಸ್ಥಿತಿ ಉತ್ತಮವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.