ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಖಂಡನೆ: ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ - Marathi Development Authority news
🎬 Watch Now: Feature Video

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ಯಾದ್ಯಂತ ಪರ-ವಿರೋಧ ವ್ಯಕ್ತವಾಗುತ್ತಿದ್ದು, ಮರಾಠಿಗಳ ಅಭಿವೃದ್ಧಿಗೆ ಸರ್ಕಾರ ರಚನೆ ಮಾಡಿರುವ ಪ್ರಾಧಿಕಾರಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಸರ್ಕಾರ ರಚನೆ ಮಾಡಿರುವ ಪ್ರಾಧಿಕಾರವನ್ನ ಕೂಡಲೇ ರದ್ದು ಮಾಡಬೇಕು ಎಂದು ಕರವೇ ಪ್ರವೀಣ್ ಶೆಟ್ಟಿ ಬಣ ಒತ್ತಾಯಿಸಿದೆ. ಸರ್ಕಾರದ ನಿರ್ಧಾರ ಖಂಡಿಸಿ ಇಂದು ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಪ್ರತಿಕೃತಿ ದಹನ ಮಾಡಲಾಯಿತು. ಸರ್ಕಾರ ಮಾಡಿರುವ ಮರಾಠ ಪ್ರಾಧಿಕಾರದ ವಿರುದ್ಧ ಕಿಡಿಕಾರಿ ಮೈಸೂರು ಬ್ಯಾಂಕ್ ರಸ್ತೆ ತಡೆಯಲು ಮುಂದಾದರು. ಈ ವೇಳೆ ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.